Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:9 - ಕನ್ನಡ ಸತ್ಯವೇದವು J.V. (BSI)

9 ದೇವರು ಅದನ್ನು ಶಾಶ್ವತವಾಗಿಯೇ ಸ್ಥಾಪಿಸುವನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು I ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:9
14 ತಿಳಿವುಗಳ ಹೋಲಿಕೆ  

ನಿನ್ನ ಕೃಪೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.


ನಿನ್ನ ನೀತಿಸಾಧನೆಯನ್ನು ಮರೆಮಾಜಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.


ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನ ವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.


ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವದು; ಅದನ್ನು ಪರಾತ್ಪರನು ತಾನೇ ಸ್ಥಿರಪಡಿಸುವನು.


ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು