Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:18 - ಕನ್ನಡ ಸತ್ಯವೇದವು J.V. (BSI)

18 ಸಿರಿ ಬಂದಾಗ ಹೆರರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ ಜನಸ್ತುತಿಯಿಂದಲೂ ಕೂಡಿದವನಾದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಿರಿಬಂದಾಗ ಕೊರತೆಯಿರದು ಹೊಗಳಿಕೆಗೆ I ಆತ್ಮಸ್ತುತಿ, ಮುಖಸ್ತುತಿ, ಇವುಗಳ ಮೆರೆತಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಿರಿ ಬಂದಾಗ ಜನರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನಸ್ತುತಿಯಿಂದಲೂ ಕೂಡಿದವನಾದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:18
10 ತಿಳಿವುಗಳ ಹೋಲಿಕೆ  

ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.


ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?


ಅರಸನು - ರಾಜನಿವೇಶನದಲ್ಲಿರುವ ರಾಜಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗ ನಮಸ್ಕಾರಮಾಡಬೇಕೆಂದು ಅಪ್ಪಣೆಮಾಡಿದ್ದರಿಂದ ಎಲ್ಲರೂ ಹಾಗೆ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಲಿಲ್ಲ.


ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರವಿುಸಿಕೊಳ್ಳುತ್ತಿದ್ದೆನು.


ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವದು; ಅವನಿಗೆ ಮಗನಿದ್ದರೆ [ಆ ಮಗನಿಗಾಗಿ] ಅವನ ಕೈಯಲ್ಲಿ ಏನೂ ಇರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು