Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:3 - ಕನ್ನಡ ಸತ್ಯವೇದವು J.V. (BSI)

3 ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವದು; ನನ್ನ ಹೃದಯವು ವಿವೇಕವನ್ನು ಫಲಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ಬಾಯಿ ಬೋಧಿಸುವುದು ಸುಜ್ಞಾನವನು I ನನ್ನ ಮನ ಧ್ಯಾನಿಸುವುದು ವಿವೇಚನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿಮಗೆ ಸುಜ್ಞಾನವನ್ನೂ ವಿವೇಕವನ್ನೂ ಬೋಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಬಾಯಿ ಜ್ಞಾನವನ್ನು ನುಡಿಯುವುದು, ನನ್ನ ಹೃದಯದ ಧ್ಯಾನವು ವಿವೇಕವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:3
15 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.


ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು; ನನ್ನ ಜ್ಞಾನಬೋಧೆಗೆ ಮನಸ್ಸಿಡು.


ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.


ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ; ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.


ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.


ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು].


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು