Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು; ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಿವಿಗೊಡು ಪ್ರಭು, ಎನ್ನ ನುಡಿಗೆ I ಬಗೆಗೊಡು ಎನ್ನಾತ್ಮದ ಮೊರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ನನ್ನ ಆಲೋಚನೆಗಳಿಗೆ ಗಮನಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ, ನನ್ನ ಪ್ರಲಾಪವನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:1
12 ತಿಳಿವುಗಳ ಹೋಲಿಕೆ  

ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.


ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.


ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ದೇವರೇ, ನನ್ನ ಆರ್ತಸ್ವರವನ್ನು ಕೇಳಿ ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.


ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.


ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ.


ಯೆಹೋವನೇ, ನ್ಯಾಯವಾದದ್ದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು, ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು ಎಂದು ಹೇಳಿದಳು.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಆಕೆಯು ಹೃದಯದಲ್ಲಿ ಪ್ರಾರ್ಥಿಸುತ್ತಿದ್ದದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸಲಿಲ್ಲ. ಆದದರಿಂದ ಈಕೆಯು ಮದ್ಯಪಾನಮಾಡಿದ್ದಾಳೆಂದು ಅವನು ನೆನಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು