Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:12 - ಕನ್ನಡ ಸತ್ಯವೇದವು J.V. (BSI)

12 ಆದಕಾರಣ ನಿನ್ನನ್ನು ಮರೆಹೊಕ್ಕವರೆಲ್ಲರು ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ; ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ನೀವು ನೀತಿವಂತರನ್ನು ನಿಶ್ಚಯವಾಗಿ ಆಶೀರ್ವದಿಸಿದ್ದೀರಿ; ನೀವು ಅವರನ್ನು ನಿಮ್ಮ ಮೆಚ್ಚುಗೆಯಿಂದ ಗುರಾಣಿಯಂತೆಯೇ ಆವರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:12
12 ತಿಳಿವುಗಳ ಹೋಲಿಕೆ  

ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ಯಾಹುವಿಗೆ ಸ್ತೋತ್ರ! ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ.


ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.


ಉತ್ಸಾಹಧ್ವನಿಯೂ ಜಯಘೋಷವೂ ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.


ಅಭಿಮುಖನಾಗಿ ಕರುಣಿಸು; ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವದು ನಿನಗೆ ವಿಧಿಯಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು