Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:13 - ಕನ್ನಡ ಸತ್ಯವೇದವು J.V. (BSI)

13 ನಾನು ಹೋರಿಗಳ ಮಾಂಸವನ್ನು ತಿನ್ನುವದೂ ಹೋತಗಳ ರಕ್ತವನ್ನು ಕುಡಿಯುವದೂ ಉಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೋರಿಗಳ ಮಾಂಸವನು ನಾ ಭುಜಿಸುವುದುಂಟೆ? I ಹೋತಗಳ ರಕ್ತವನು ನಾ ಕುಡಿಯುವುದುಂಟೇ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಹೋರಿಗಳ ಮಾಂಸವನ್ನು ತಿನ್ನುವೆನೇ? ನಾನು ಆಡುಗಳ ರಕ್ತವನ್ನು ಕುಡಿಯುವೆನೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೋರಿಗಳ ಮಾಂಸವನ್ನು ನಾನು ಭುಜಿಸುವುದಿಲ್ಲ. ಹೋತಗಳ ರಕ್ತವನ್ನು ನಾನು ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:13
7 ತಿಳಿವುಗಳ ಹೋಲಿಕೆ  

ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.


ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಉಸುಬಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು.


ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.


ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.


ದೇವರು ಆತ್ಮಸ್ವರೂಪನು; ಆತನನ್ನು ಆರಾಧಿಸುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ಆರಾಧಿಸಬೇಕು ಅಂದನು.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು