Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:16 - ಕನ್ನಡ ಸತ್ಯವೇದವು J.V. (BSI)

16 ದುಷ್ಟರಿಗಾದರೋ ದೇವರು ಹೇಳುವದೇನಂದರೆ - ನನ್ನ ವಿಧಿಗಳನ್ನು ಪಠಿಸುವದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ನಿಬಂಧನೆಯನ್ನು ಉಚ್ಚರಿಸುವದು ನಿಮಗೇನು ಕೆಲಸ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ದುಷ್ಟರಿಗೆ ಹೀಗೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:16
20 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅಧರ್ಮದಿಂದ ದೊರಕುವ ದ್ರವ್ಯವನ್ನು ಪ್ರೀತಿಸಿದನು;


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.


ದೇವರು ಆತ್ಮಸ್ವರೂಪನು; ಆತನನ್ನು ಆರಾಧಿಸುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ಆರಾಧಿಸಬೇಕು ಅಂದನು.


ಮೂಢನ ಬಾಯ ಜ್ಞಾನೋಕ್ತಿಯು ಜೋಲಾಡುವ ಕುಂಟಕಾಲು.


ಇತರರನ್ನು ಹೋರಾಟಕ್ಕೆ ಕರೆದ ಮೇಲೆ ನಾನೇ ಅಯೋಗ್ಯನೆನಿಸಿಕೊಂಡೇನೋ ಎಂಬ ಭಯದಿಂದ ನನ್ನ ಮೈಯನ್ನು ಜಜ್ಜಿ ಸ್ವಾಧೀನ ಪಡಿಸಿಕೊಳ್ಳುತ್ತೇನೆ.


ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು