Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:12 - ಕನ್ನಡ ಸತ್ಯವೇದವು J.V. (BSI)

12 ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ರಕ್ಷಣೆಯಿಂದುಂಟಾಗುವ ಆನಂದವನ್ನು ನನಗೆ ಮತ್ತೆ ದಯಪಾಲಿಸು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:12
24 ತಿಳಿವುಗಳ ಹೋಲಿಕೆ  

ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.


ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ.


ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವದು; ಆತನಿಂದಾದ ರಕ್ಷಣೆಯ ನಿವಿುತ್ತ ಆನಂದಪಡುವೆನು.


ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು; ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.


ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು