Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:14 - ಕನ್ನಡ ಸತ್ಯವೇದವು J.V. (BSI)

14 ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧದಿಂದ ನನ್ನನ್ನು ಬಿಡಿಸಿರಿ, ನನ್ನ ನಾಲಿಗೆಯು ನಿಮ್ಮ ನೀತಿಯನ್ನು ಹಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:14
27 ತಿಳಿವುಗಳ ಹೋಲಿಕೆ  

ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವದು.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.


ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು.


ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ.


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.


ನಾನು ದುಷ್ಟನಿಗೆ - ದುಷ್ಟನೇ, ಸತ್ತೇಸಾಯುವಿ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆ ಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ನಮ್ಮ ದೇವರು ನಮ್ಮನ್ನು ವಿಮೋಚಿಸುವದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.


ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ಧರ್ಮಸ್ವರೂಪನೇ; ನೀನು ಸತ್ಯವನ್ನೇ ನಡಿಸಿದಿ, ನಾವಾದರೋ ದುಷ್ಟರು.


ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ;


ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು.


ತುಸು ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಗೆ ಮುಟ್ಟಿತು. ಆಗ ಅವನು - ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.


ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು