Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:15 - ಕನ್ನಡ ಸತ್ಯವೇದವು J.V. (BSI)

15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರ ಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:15
14 ತಿಳಿವುಗಳ ಹೋಲಿಕೆ  

ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಲುಗಳಲ್ಲಿ ಹರ್ಷಿಸುವೆನು.


ಆ ದಿನದಲ್ಲಿ ನಾನು ಇಸ್ರಾಯೇಲ್‍ವಂಶಕ್ಕೆ ಕೊಂಬನ್ನು ಮೊಳೆಯಿಸಿ ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ನನ್ನ ತುಟಿಗಳು ನಿನ್ನ ವಿಧಿವಚನಗಳನ್ನೆಲ್ಲಾ ವರ್ಣಿಸುತ್ತವೆ.


ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.


ಮನುಷ್ಯರಿಗೆ ಬಾಯಿ ಕೊಟ್ಟವರಾರು? ಒಬ್ಬನು ಮೂಕನಾಗಿ ಮತ್ತೊಬ್ಬನು ಕಿವುಡನಾಗಿ ಒಬ್ಬನು ಕಣ್ಣುಳ್ಳವನಾಗಿ ಮತ್ತೊಬ್ಬನು ಕಣ್ಣಿಲ್ಲದವನಾಗಿ ಇರಬೇಕೆಂದು ನೇವಿುಸಿದವರಾರು? ಯೆಹೋವನಾಗಿರುವ ನಾನಲ್ಲವೇ.


ಅವನ ನಾಲಿಗೆಯನ್ನು ಮುಟ್ಟಿ ಆಕಾಶದ ಕಡೆಗೆ ನೋಡಿ ನಿಟ್ಟುಸುರು ಬಿಟ್ಟು ಅವನಿಗೆ - ಎಪ್ಫಥಾ ಎಂದು ಹೇಳಿದನು. ಆ ಶಬ್ದಕ್ಕೆ ತೆರೆಯಲಿ ಎಂದರ್ಥ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಅವನನ್ನು - ಏನಪ್ಪಾ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ನಿಮಗೆ ತಿಳಿಯಲಿಲ್ಲವೋ ಎಂದು ಕೇಳಲು ಯೆಹೂದನು - ನಾವು ನಮ್ಮ ಸ್ವಾವಿುಗೆ ಏನು ಹೇಳೋಣ? ನಾವು ಹೇಗೆ ಮಾತಾಡೇವು? ನಾವು ನಿರ್ದೋಷಿಗಳಾಗಿ ತೋರುವಂತೆ ಏನು ಮಾಡಬೇಕು? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ಗುಲಾಮರಾದೆವಲ್ಲವೇ ಅನ್ನಲು ಯೋಸೇಫನು -


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು