Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:19 - ಕನ್ನಡ ಸತ್ಯವೇದವು J.V. (BSI)

19 ಜನರು ನ್ಯಾಯವಾದ ಯಜ್ಞಗಳನ್ನೂ ಸರ್ವಾಂಗ ಹೋಮಗಳನ್ನೂ ಸಮರ್ಪಿಸಿ ನಿನಗೆ ಸಂತೋಷವನ್ನುಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಜನರು ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ನೀತಿಯ ಯಜ್ಞಗಳಲ್ಲಿಯೂ ಸಂಪೂರ್ಣ ದಹನಬಲಿಗಳಲ್ಲಿಯೂ, ನೀವು ಸಂತೋಷಪಡುವಿರಿ; ಆಗ ನಿಮ್ಮ ಬಲಿಪೀಠದ ಮೇಲೆ ಹೋರಿಗಳನ್ನು ಅರ್ಪಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:19
10 ತಿಳಿವುಗಳ ಹೋಲಿಕೆ  

ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.


ನಾನು ಈ ದೇಶವನ್ನೂ ನಿವಾಸಿಗಳನ್ನೂ ಶಾಪ ವಿಸ್ಮಯಗಳಿಗೆ ಗುರಿಮಾಡುವೆನೆಂಬದನ್ನು ನೀನು ಕೇಳಿದಾಗ ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು