Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:2 - ಕನ್ನಡ ಸತ್ಯವೇದವು J.V. (BSI)

2 ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ ನನ್ನನ್ನು ಶುದ್ಧಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:2
17 ತಿಳಿವುಗಳ ಹೋಲಿಕೆ  

ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.


ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ;


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.


ಆ ಬಟ್ಟೆಯನ್ನಾಗಲಿ ಹಾಸನ್ನಾಗಲಿ ಹೊಕ್ಕನ್ನಾಗಲಿ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವದು.


ಆಗ ದಾವೀದನು ಆಗಲೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ದೂತರ ಮುಖಾಂತರವಾಗಿ ಕರೇಕಳುಹಿಸಿದನು; ಆಕೆಯು ಬರಲು ಆಕೆಯನ್ನು ಕೂಡಿದನು.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ಸೀಮೋನ ಪೇತ್ರನು - ಸ್ವಾಮೀ, ನನ್ನ ಕಾಲುಗಳನ್ನು ಮಾತ್ರವಲ್ಲದೆ ಕೈಗಳನ್ನೂ ತಲೆಯನ್ನೂ ಸಹ ತೊಳೆಯಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು