Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:8 - ಕನ್ನಡ ಸತ್ಯವೇದವು J.V. (BSI)

8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದ ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹರ್ಷಾನಂದವನು ಮೊಳಗಿಸೆನ್ನೊಳು I ಪುಳಕಗೊಳ್ಳುವುವು ನೀ ಮುರಿದೆಲುಬುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನಲ್ಲಿ ಆನಂದವನ್ನೂ ಉಲ್ಲಾಸವನ್ನೂ ಬರಮಾಡು. ನೀನು ಜಜ್ಜಿಹಾಕಿದ ಮೂಳೆಗಳು ಮತ್ತೆ ಉಲ್ಲಾಸಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ; ನೀವು ಜಜ್ಜಿದ ಎಲುಬುಗಳು ಆನಂದಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:8
17 ತಿಳಿವುಗಳ ಹೋಲಿಕೆ  

ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥವೇ ತಪ್ಪಿಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.


ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು.


ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು