ಕೀರ್ತನೆಗಳು 52:1 - ಕನ್ನಡ ಸತ್ಯವೇದವು J.V. (BSI)1 ದುಷ್ಟಾಧಿಕಾರಿಯೇ, ನೀನು ಕೆಡುಕು ಮಾಡಿ ಹಿಗ್ಗುವದೇನು? ದೇವರ ಕೃಪೆಯು ಯಾವಾಗಲೂ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು. ಅಧ್ಯಾಯವನ್ನು ನೋಡಿ |
ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.