Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:1 - ಕನ್ನಡ ಸತ್ಯವೇದವು J.V. (BSI)

1 ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯಕೃತ್ಯಗಳನ್ನು ನಡಿಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:1
24 ತಿಳಿವುಗಳ ಹೋಲಿಕೆ  

ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನನುಸರಿಸುತ್ತಿರುವ ದೇವದಾಸ ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ನಡಿಸುವವರಾದರು.


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಮಾತಾಡುವದಾದರೂ ನಾಚಿಕೆಗೆ ಕಾರಣವಾಗಿದೆ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ದುಷ್ಟನು ನಿನ್ನನ್ನು ಯಾಕೆ ಅಲಕ್ಷ್ಯಮಾಡಬೇಕು? ದೇವರು ವಿಚಾರಿಸುವದೇ ಇಲ್ಲವೆಂದು ಹೇಳಿಕೊಳ್ಳುವದೇಕೆ?


[ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.


ತಾನು ಕದಲುವದೇ ಇಲ್ಲ; ತನಗೆ ವಿಪತ್ತು ಎಂದೆಂದಿಗೂ ಸಂಭವಿಸುವದಿಲ್ಲ ಅಂದುಕೊಂಡಿದ್ದಾನೆ.


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಅವನು ತನ್ನ ಮನಸ್ಸಿನಲ್ಲಿ - ರಾಜ್ಯವು ತಿರಿಗಿ ದಾವೀದನ ಕುಟುಂಬದವರಿಗೆ ಆಗುವದೋ ಏನೋ;


ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡಿಸಿದ್ದೀ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿದಿ.


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡಿಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡಿ.


ಪಶುಪ್ರಾಯನು ಅರಿಯನು; ಹುಚ್ಚನು ತಿಳಿಯನು.


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು