ಕೀರ್ತನೆಗಳು 53:2 - ಕನ್ನಡ ಸತ್ಯವೇದವು J.V. (BSI)2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಾನವರನು ದೇವ ಸ್ವರ್ಗದಿಂದ ಸಮೀಕ್ಷಿಸುತಿಹನು I ತನ್ನನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೋ ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.