Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:3 - ಕನ್ನಡ ಸತ್ಯವೇದವು J.V. (BSI)

3 ಒಳ್ಳೆಯದನ್ನು ನಡಿಸುವವರು ಒಬ್ಬರಾದರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಳಿತನೆಸಗುವವರು ಒಬ್ಬರೂ ಇಲ್ಲ I ದ್ರೋಹಿಗಳು, ದುಷ್ಕರ್ಮಿಗಳು ಅವರೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:3
13 ತಿಳಿವುಗಳ ಹೋಲಿಕೆ  

ಎಲ್ಲರೂ ದಾರಿತಪ್ಪಿ ನಡೆಯುತ್ತಾರೆ, ಎಲ್ಲರೂ ಕೆಲಸಕ್ಕೆ ಬಾರದವರಾದರು. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನು ದಾರಿತಪ್ಪಿದವನು, ಎಲ್ಲರೂ ಕೆಟ್ಟುಹೋದವರೇ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಆಗ ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್‍ತಗ್ಗಿನಿಂದ ಯೆರೂಸಲೇವಿುನವರೆಗೂ ಅವನ ಜೊತೆಯಲ್ಲಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು