Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 54:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನೀನು ನನ್ನನ್ನು ಸರ್ವಾಪತ್ತುಗಳಿಂದ ಬಿಡಿಸಿ ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿಮಗೆ ಸ್ವಂತ ಇಚ್ಛೆಯಿಂದ ಬಲಿಯನ್ನು ಅರ್ಪಿಸುವೆನು. ಯೆಹೋವ ದೇವರೇ, ನಿಮ್ಮ ಒಳ್ಳೆಯ ಹೆಸರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 54:6
14 ತಿಳಿವುಗಳ ಹೋಲಿಕೆ  

[ದೇವರೇ] ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಅದನ್ನೇ ನಿರೀಕ್ಷಿಸಿಕೊಂಡಿರುವೆನು.


ಯಾಹುವಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವದು ಒಳ್ಳೇದೂ ಸಂತೋಷಕರವೂ ಆಗಿದೆ; ಆತನನ್ನು ಕೀರ್ತಿಸುವದು ಯುಕ್ತವಾಗಿದೆ.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.


ಕೃತಜ್ಞತಾಯಜ್ಞಗಳನ್ನು ಸಮರ್ಪಿಸಿ ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ನಾನು ನಿನಗೆ ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.


ಯೆಹೋವನೇ, ನಿನ್ನನ್ನು ಕೊಂಡಾಡುವದೂ ಪರಾತ್ಪರನೇ, ನಿನ್ನ ನಾಮವನ್ನು ಸಂಕೀರ್ತಿಸುವದೂ ಯುಕ್ತವಾಗಿದೆ.


ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.


ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು.


ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು