Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:10 - ಕನ್ನಡ ಸತ್ಯವೇದವು J.V. (BSI)

10 ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡುತೊಂದರೆಗಳು ಪ್ರಬಲವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಗೋಡೆ ಸುತ್ತಲೂ ತಿರುಗುತಿಹರವರು ಹಗಲಿರುಳು I ನಗರದೊಳಗೆ ತುಂಬಿವೆ ಅಕ್ರಮ ಅನಾಚಾರಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹಗಲಿರುಳು, ಈ ನಗರದಲ್ಲೆಲ್ಲಾ ಅಪರಾಧ ಮತ್ತು ಬಲಾತ್ಕಾರಗಳು ತುಂಬಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಹಗಲಿರುಳು ಪಟ್ಟಣದ ಗೋಡೆಗಳನ್ನು ಸುತ್ತುತ್ತಾರೆ. ಕೇಡು ಅನಾಚಾರಗಳು ಅದರ ಮಧ್ಯದಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:10
16 ತಿಳಿವುಗಳ ಹೋಲಿಕೆ  

ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.


ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.


ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿರುತ್ತಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ.


ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾರೆ.


ಸೌಲನು ಕೂಡಲೆ ದೂತರನ್ನು ಕರಿಸಿ - ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ - ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ ಎಂದು ಹೇಳಿ


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ದುಷ್ಟರು ಜನ್ಮದಿಂದಲೇ ಧರ್ಮ ಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ಬಿಟ್ಟವರು.


ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು