Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:12 - ಕನ್ನಡ ಸತ್ಯವೇದವು J.V. (BSI)

12 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುವಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನನ್ನು ನಿಂದಿಸುವವನು ಶತ್ರುವಲ್ಲ, ಶತ್ರುವಾದರೆ ತಾಳಿಕೊಳ್ಳುತ್ತಿದ್ದೆ. ನನಗೆ ವಿರೋಧವಾಗಿರುವವನು ನನ್ನ ವೈರಿಯಾಗಿದ್ದರೆ, ಅವನಿಂದ ಅಡಗಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:12
7 ತಿಳಿವುಗಳ ಹೋಲಿಕೆ  

ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗುವರಲ್ಲಾ ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು