Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:15 - ಕನ್ನಡ ಸತ್ಯವೇದವು J.V. (BSI)

15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:15
13 ತಿಳಿವುಗಳ ಹೋಲಿಕೆ  

ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬದು ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ.


ಆದರೆ ದೇವರು ಬಾಣವನ್ನು ಎಸೆಯಲು ಫಕ್ಕನೆ ಅವರಿಗೆ ಗಾಯವಾಗುವದು.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ಆಗ ಯೋವಾಬನು - ಇಲ್ಲಿ ನಿಂತು ತಡ ಮಾಡುವದೇಕೆ ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ


ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು