Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:18 - ಕನ್ನಡ ಸತ್ಯವೇದವು J.V. (BSI)

18 ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಸುತ್ತಲೂ ಶತ್ರುವ್ಯೂಹವಿರುವಲ್ಲಿ I ರಕ್ಷಿಸುವನೆನ್ನನು ನಾ ನಡೆಸುವ ದಾಳಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದೇನೆ. ಆದರೆ ಪ್ರತಿಸಲವೂ ದೇವರು ನನ್ನನ್ನು ಪಾರುಮಾಡಿ, ಸುರಕ್ಷಿತವಾಗಿ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನೇಕರು ನನ್ನನ್ನು ವಿರೋಧಿಸಿದರೂ ನನಗೆ ವಿರೋಧವಾಗಿ ಆಗುವ ಯುದ್ಧಗಳಲ್ಲಿ ದೇವರು ನನ್ನನ್ನು ಯಾವುದೇ ಹಾನಿಯಾಗದಂತೆ ವಿಮೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:18
14 ತಿಳಿವುಗಳ ಹೋಲಿಕೆ  

ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು.


ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಮಂದಿ.


ಆಗ ಎಲೀಷನು ಅವನಿಗೆ - ಹೆದರಬೇಡ; ಅವರ ಕಡೆಯಲ್ಲಿರುವವರಿಗಿಂತಲೂ ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ ಎಂದು ಹೇಳಿ -


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ಅಹೀಮಾಚನು ಹತ್ತಿರ ಬಂದು ಅರಸನಿಗೆ ಶುಭವಾಗಲಿ ಎಂದು ಹೇಳಿ ಸಾಷ್ಟಾಂಗನಮಸ್ಕಾರಮಾಡಿ - ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಅಂದನು.


ಯೆಹೋವನೇ, ನ್ಯಾಯವಾದದ್ದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು, ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ನೀನು ನನ್ನ ಧ್ವನಿಯನ್ನು ಕೇಳಿದಿ; (ನನ್ನ ನಿಟ್ಟುಸುರಿಗೂ ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು