Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:3 - ಕನ್ನಡ ಸತ್ಯವೇದವು J.V. (BSI)

3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ ಹೊಯ್ದಾಡುತ್ತಾ ನರಳುತ್ತೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ಆ ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:3
12 ತಿಳಿವುಗಳ ಹೋಲಿಕೆ  

ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


ಆಗ ಮಹಾಯಾಜಕರೂ ಹಿರಿಯ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಬಂದು ನಿಂತರೂ ಏನೂ ಸಿಕ್ಕಲಿಲ್ಲ.


ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆ ಕೊಚ್ಚುತ್ತಾರೆ.


ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ ಎಂದು ಹೇಳಿಕೊಳ್ಳುತ್ತಾರೆ.


ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ.


ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ಕಾಯಿ; ಕಣ್ಣುಗುಡ್ಡಿನಂತೆಯೇ ಕಾಪಾಡು.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವನು ನೆನಸದಿರಲಿ, ಲಕ್ಷಿಸದಿರಲಿ.


ಆಗ ಅಬ್ಷಾಲೋಮನು - ನೋಡು, ನಿನ್ನ ಕಾರ್ಯವು ಒಳ್ಳೇದೂ ನ್ಯಾಯವಾದದ್ದೂ ಆಗಿದೆ; ಆದರೆ ವ್ಯಾಜ್ಯಗಳನ್ನು ವಿಚಾರಿಸುವದಕ್ಕೆ ಅರಸನಿಂದ ಒಬ್ಬನೂ ನೇಮಕವಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು