Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:13 - ಕನ್ನಡ ಸತ್ಯವೇದವು J.V. (BSI)

13 ನಿನಗೆ ಹೊತ್ತ ಹರಕೆಗಳನ್ನು ಸಲ್ಲಿಸುವೆನು; ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಕೆಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:13
20 ತಿಳಿವುಗಳ ಹೋಲಿಕೆ  

ದೇವರು ಎರಡು ಸಾರಿಯಲ್ಲದೆ ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.


ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ.


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.


ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ!


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು.


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ಮರಣಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.


ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಸಮರ್ಪಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಆಯಾ ದಿನಕ್ಕೆ ನೇವಿುಸಿರುವ ಪ್ರಕಾರ ಸರ್ವಾಂಗಹೋಮ, ನೈವೇದ್ಯದ್ರವ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನೂ ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು