Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:7 - ಕನ್ನಡ ಸತ್ಯವೇದವು J.V. (BSI)

7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ಬಾರಿಸುತ್ತಾ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ದೃಢವಾಗಿದೆ. ನಾನು ವಾದ್ಯ ಬಾರಿಸುತ್ತಾ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ. ಹೌದು, ನನ್ನ ಹೃದಯವು ಸ್ಥಿರವಾಗಿದೆ. ನಾನು ಸಂಗೀತದೊಡನೆ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:7
11 ತಿಳಿವುಗಳ ಹೋಲಿಕೆ  

ಅವನಿಗೆ ಕೆಟ್ಟ ಸುದ್ದಿಯ ಭಯವಿರುವದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವದರಿಂದ ಅವನ ಮನಸ್ಸು ಸ್ಥಿರವಾಗಿರುವದು.


ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.


ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು


ಮೂಡಣವರೇ, ಯೆಹೋವನನ್ನು ಸನ್ಮಾನಿಸಿರಿ; ಕರಾವಳಿಯವರೇ, ಇಸ್ರಾಯೇಲ್ಯರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ ಎಂದು ಕೂಗುವರು.


ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವಗಳಲ್ಲಿಯೂ ಉಲ್ಲಾಸವಾಗಿದ್ದೇವೆ.


ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಅಕಾರಣವಾಗಿ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ದುಷ್ಟರು ಬಲೆಯೊಡ್ಡಿದ್ದಾರೆ; ನಾನು ನಿನ್ನ ನೇಮಗಳನ್ನು ತಪ್ಪಿಹೋಗುವದಿಲ್ಲ.


ನಾನು ಯೆಹೋವನಿಗೆ - ನೀನೇ ನನ್ನ ದೇವರು; ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು;


ಕೆಡುಕರು ಒಡ್ಡಿದ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು; ಅವರಿಟ್ಟ ಬೋನಿಗೆ ನನ್ನನ್ನು ತಪ್ಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು