Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:9 - ಕನ್ನಡ ಸತ್ಯವೇದವು J.V. (BSI)

9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಒಡೆಯನೇ, ಜನಾಂಗಗಳ ನಡುವೆ ನಿನ್ನನ್ನು ಕೊಂಡಾಡುವೆನು. ಎಲ್ಲಾ ದೇಶಗಳಲ್ಲಿ ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:9
10 ತಿಳಿವುಗಳ ಹೋಲಿಕೆ  

ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.


ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.


[ಯೆಹೋವನೇ,] ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳೆದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.


ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?


ಜನಾಂಗಗಳಾದರೆ ಕಾರುಣ್ಯದ ನಿವಿುತ್ತ ದೇವರನ್ನು ಕೊಂಡಾಡುತ್ತಾರೆಂಬದೇ. ಇದಕ್ಕೆ ಸರಿಯಾಗಿ ಶಾಸ್ತ್ರದಲ್ಲಿಯೂ ಬರೆದದೆ. ಹೇಗಂದರೆ - ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದೂ


ಎಚ್ಚರವಾಗು, ದೆಬೋರಳೇ, ಎಚ್ಚರವಾಗು; ಎಚ್ಚರವಾಗು, ಎಚ್ಚರವಾಗಿ ಗಾನ ಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು