ಕೀರ್ತನೆಗಳು 58:11 - ಕನ್ನಡ ಸತ್ಯವೇದವು J.V. (BSI)11 ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.” ಅಧ್ಯಾಯವನ್ನು ನೋಡಿ |