Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:2 - ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ, ದೇಶದಲ್ಲಿ ನಿಮ್ಮ ಕೈಗಳಿಂದ ಹಿಂಸಾಚಾರವನ್ನು ತೂಗುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:2
14 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು?


ಅಯ್ಯೋ, ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ ನನ್ನ ಜನರಲ್ಲಿನ ದರಿದ್ರರಿಗೆ ನ್ಯಾಯವನ್ನು ತಪ್ಪಿಸಬೇಕೆಂತಲೂ ವಿಧವೆಯರನ್ನು ಸೂರೆಮಾಡಿ ಅನಾಥರನ್ನು ಕೊಳ್ಳೆಹೊಡೆಯಬೇಕೆಂತಲೂ


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ಶಿಷ್ಟನ ಮಾರ್ಗವು ನೇರವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ.


ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವದಿಲ್ಲ.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು