Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:5 - ಕನ್ನಡ ಸತ್ಯವೇದವು J.V. (BSI)

5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿನಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಲಿಯದವರ ಕಿವಿ ಪುಂಗಿಯ ನಾದಕೆ I ಮಣಿಯವು ಹಾವಾಡಿಗನ ಮಾಟಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಚಮತ್ಕಾರದಿಂದ ಆಕರ್ಷಿಸಿ, ಕೌಶಲ್ಯದಿಂದ ನುಡಿಸುವ ಹಾವಾಡಿಗನ ನಾದವನ್ನು ಕೇಳದ ಹಾವಿನಂತೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:5
5 ತಿಳಿವುಗಳ ಹೋಲಿಕೆ  

ಯೆಹೋವನು - ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು ಎಂದು ನುಡಿದಿದ್ದಾನೆ.


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.


ಅದರ ರಸ ಸರ್ಪವಿಷದಂತೆ ಮರಣಕರವಾದದ್ದು.


ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು; ಬಲಾತ್ಕಾರಿಗಳಿಗೆ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು