Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:9 - ಕನ್ನಡ ಸತ್ಯವೇದವು J.V. (BSI)

9 ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:9
17 ತಿಳಿವುಗಳ ಹೋಲಿಕೆ  

ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.


ಅವರು ಜೇನ್ನೊಣಗಳಂತೆ ನನ್ನನ್ನು ಕವಿದರು; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹಸರಿಸುವೆನು.


ಮೂಢರ ನಗುವಾಟವು ಹಂಡೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆ. ಇದೂ ವ್ಯರ್ಥ.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯಮಾಡುವೆನು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವದರಿಂದ ಅವನ ಗ್ರಹಿಕೆಗೆ ಬರುವದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರ ಮಾಡುತ್ತಾನೆ.


ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ.


ಮೂಡಣ ಗಾಳಿಯು ಕೊಚ್ಚುವದರಿಂದ ಅವನು ಹೋಗೇ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದೊಳಗಿಂದ ಹಾರಿಸಿಬಿಡುವದು.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.


ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವವಾದ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂವಿುಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವದರಿಂದ ಇವರೆಲ್ಲರೂ ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ ಇವರು ಯೆಹೋವನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು ಎಂದು ಹೇಳಿದನು.


ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದ ಹೂಳಿಟ್ಟ ಪಿಂಡದಂತೆಯಾಗಲಿ ಬೆಳಕನ್ನೇ ಕಾಣದೆ ಸತ್ತ ಕೂಸುಗಳಂತೆಯಾಗಲಿ ಆಗಿದ್ದರೆ ಜನ್ಮವಿಲ್ಲದೆ ಇರುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು