ಕೀರ್ತನೆಗಳು 59:11 - ಕನ್ನಡ ಸತ್ಯವೇದವು J.V. (BSI)11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ; ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದರಿಸಿ ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ. ಅಧ್ಯಾಯವನ್ನು ನೋಡಿ |