ಕೀರ್ತನೆಗಳು 59:7 - ಕನ್ನಡ ಸತ್ಯವೇದವು J.V. (BSI)7 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |