Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:1
12 ತಿಳಿವುಗಳ ಹೋಲಿಕೆ  

ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.


ನನ್ನ ಸೇವಕ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು; ವಿುತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವದಿಲ್ಲ. ಇದು ಯೆಹೋವನ ನುಡಿ.


ಯಾಹು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ಒಪ್ಪಿಸಲಿಲ್ಲ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ಓಬೇದೆದೋಮ್, ಯೆಗೀಯೇಲ್, ಅಜಜ್ಯ ಎಂಬವರು ಗಾಯನ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನರಿಗಳನ್ನು ಬಾರಿಸುವವರು.


ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಲಯದಂತಿದೆ; ಇಂಥಾ ಜಲಪ್ರಲಯವು ಭೂವಿುಯನ್ನು ತಿರಿಗಿ ಆವರಿಸುವದಿಲ್ಲವೆಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವದಿಲ್ಲ, ಗದರಿಸುವದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.


ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಇಕ್ಕಟ್ಟಿನಿಂದ ಬಿಡಿಸಿ ಇಂಬಾದ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಅಂಗೀಕರಿಸು.


ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಕೆಯುಳ್ಳವರು ಕಾಣಿಸುವದೇ ಇಲ್ಲ.


ಅನಂತರ ಆತನು ಸಿಟ್ಟಾಗಿ - ನಾನು ನೇವಿುಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು ಎಂದು ಹೇಳಿ


ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ, ಬೆನಾಯ ಎಂಬವರು ತಾರಕ ಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು