Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:9 - ಕನ್ನಡ ಸತ್ಯವೇದವು J.V. (BSI)

9 ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ; ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಸ್ವೀಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:9
15 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ನನ್ನ ಆತ್ಮವು ನನ್ನಲ್ಲಿ ಕುಂದಿದಾಗ ಯೆಹೋವನಾದ ನಿನ್ನನ್ನು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ನಿನ್ನ ಪರಿಶುದ್ಧಾಲಯಕ್ಕೆ ಸೇರಿತು.


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ ನನ್ನನ್ನು ವಿಶಾಲಸ್ಥಳದಲ್ಲಿ ಇಟ್ಟನು.


ಇಕ್ಕಟ್ಟಿನಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಕೂಗಿಕೊಂಡೆನು, ಆಹಾ, ನನ್ನ ಧ್ವನಿಯನ್ನು ಲಾಲಿಸಿದಿ.


ನಾನು ಯೆಹೋವನಿಗೆ ಮೊರೆಯಿಡುವಾಗ ಆತನು ತನ್ನ ಪರಿಶುದ್ಧಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.


ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ.


ನೀನು ನನ್ನ ಧ್ವನಿಯನ್ನು ಕೇಳಿದಿ; (ನನ್ನ ನಿಟ್ಟುಸುರಿಗೂ ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು