ಕೀರ್ತನೆಗಳು 60:12 - ಕನ್ನಡ ಸತ್ಯವೇದವು J.V. (BSI)12 ದೇವರಿಂದ ಶೂರಕೃತ್ಯಗಳನ್ನು ನಡಿಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನಾತ ಖರೆಯಾಗಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.