Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:9 - ಕನ್ನಡ ಸತ್ಯವೇದವು J.V. (BSI)

9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೋಟೆಯ ನಗರಕೆ ನನ್ನನು ಕರೆದೊಯ್ಯುವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:9
7 ತಿಳಿವುಗಳ ಹೋಲಿಕೆ  

ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು.


ಆ ದಿವಸ ದಾವೀದನು - ಯೆಬೂಸಿಯರನ್ನು ಯಾವನು ಮೊದಲು ಸೋಲಿಸುವನೋ ಅವನು ಪ್ರಮುಖನೂ ದಳಪತಿಯೂ ಆಗುವನು ಎಂದು ಹೇಳಲು ಚೆರೂಯಳ ಮಗನಾದ ಯೋವಾಬನು ಮೊದಲು ಹತ್ತಿದ್ದರಿಂದ ಅವನೇ ಪ್ರಮುಖನಾದನು.


ಕಿರ್ಯತ್‍ಸೇಫೆರನ್ನು ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಲು


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು