ಕೀರ್ತನೆಗಳು 63:11 - ಕನ್ನಡ ಸತ್ಯವೇದವು J.V. (BSI)11 ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಅರಸನು ದೇವರಲ್ಲಿ ಸಂತೋಷಿಸುವನು. ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು. ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು. ಅಧ್ಯಾಯವನ್ನು ನೋಡಿ |