Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 63:2 - ಕನ್ನಡ ಸತ್ಯವೇದವು J.V. (BSI)

2 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ ಪ್ರಭಾವವನ್ನೂ ಕಂಡ ಪ್ರಕಾರ ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 63:2
19 ತಿಳಿವುಗಳ ಹೋಲಿಕೆ  

ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.


ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸೌಂದರ್ಯಗಳೂ ಇರುತ್ತವೆ.


ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.


ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು; ನಿನ್ನ ಪ್ರತಾಪವನ್ನು ವರ್ಣಿಸುವರು.


ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ ಯೆಹೋವನನ್ನು ಕೊಂಡಾಡಿರಿ.


ತನ್ನ ಪ್ರತಾಪವನ್ನು ಸೆರೆಗೂ ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.


ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಚಿತ್ತೈಸುತ್ತಾನೆ.


ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.


ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು