Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:8 - ಕನ್ನಡ ಸತ್ಯವೇದವು J.V. (BSI)

8 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಎಡವಿ ಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:8
19 ತಿಳಿವುಗಳ ಹೋಲಿಕೆ  

ಜ್ಞಾನಹೀನನಿಗೆ ಬಾಯಿ ನಾಶ; ತುಟಿಗಳು ಪಾಶ.


ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೇ ಬರಲಿ;


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.


ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ - ನಿನೆವೆಯೂ ಹಾಳಾಯಿತಲ್ಲಾ, ಯಾರು ಗೋಳಾಡಾರು, ನಿನ್ನನ್ನು ಸಂತೈಸತಕ್ಕವರು ನನಗೆ ಎಲ್ಲಿ ಸಿಕ್ಕಾರು ಅಂದುಕೊಳ್ಳುವನು.


ಇಸ್ರಾಯೇಲು ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೇನು? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ.


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.


ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿಮಾಡಿ ತಲೆ ಆಡಿಸುತ್ತಾ -


ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಬಾಯೇ, ನಿನ್ನ ತುಟಿಗಳು ಕೂಡಾ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ.


ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.


ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.


ಅವರ ಬಾಯಿಂದ ಬರುವದೆಲ್ಲಾ ಪಾಪವೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿ ಬೀಳಲಿ.


ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ -


ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.


ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ - ಭೂವಿುಯು ನಮ್ಮನ್ನೂ ನುಂಗೀತೆಂದು ಓಡಿಹೋದರು.


ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು; ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು