ಕೀರ್ತನೆಗಳು 65:4 - ಕನ್ನಡ ಸತ್ಯವೇದವು J.V. (BSI)4 ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಸೇವಕರನ್ನು ಆರಿಸಿಕೊಂಡಾತನು ನೀನೇ. ನಿನ್ನ ಆಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಾತನು ನೀನೇ. ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ. ಅಧ್ಯಾಯವನ್ನು ನೋಡಿ |