ಕೀರ್ತನೆಗಳು 65:9 - ಕನ್ನಡ ಸತ್ಯವೇದವು J.V. (BSI)9 ನೀನು ನಮ್ಮ ದೇಶವನ್ನು ಕಟಾಕ್ಷಿಸಿ ಅದರ ಮೇಲೆ ಮಳೆಸುರಿಸಿ ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂವಿುಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, ಅದನ್ನು ಫಲವತ್ತಾಗಿ ಮಾಡುತ್ತೀರಿ. ದೇವರ ನದಿಯು ನೀರಿನಿಂದ ತುಂಬಿದೆ. ಹೀಗೆ ಭೂಮಿಯನ್ನು ಸಿದ್ಧಮಾಡಿ, ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ. ಅಧ್ಯಾಯವನ್ನು ನೋಡಿ |