Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:5 - ಕನ್ನಡ ಸತ್ಯವೇದವು J.V. (BSI)

5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳಿಕೆ ನರರಲ್ಲಿ ಭಯಹುಟ್ಟಿಸತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಕಾರ್ಯಗಳು ಅತ್ಯದ್ಭುತವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:5
11 ತಿಳಿವುಗಳ ಹೋಲಿಕೆ  

ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.


ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ಪ್ರಳಯವನ್ನು ನಡಿಸಿದ್ದಾನೆ.


ಕೆಂಪುಸಮುದ್ರದ ಬಳಿಯಲ್ಲಿ ಘೋರ ಕೃತ್ಯಗಳನ್ನೂ ನಡಿಸಿದ ತಮ್ಮ ರಕ್ಷಕನಾದ ದೇವರನ್ನು ಮರೆತೇಬಿಟ್ಟರು.


ಅವರು ಯೆಹೋವನ ಪೂಜ್ಯವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ ಪರಕುಲದವರನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು