Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:17 - ಕನ್ನಡ ಸತ್ಯವೇದವು J.V. (BSI)

17 ದೇವರಿಗೆ ಸಹಸ್ರಾರು ಮಾತ್ರವಲ್ಲ, ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ ಸೀನಾಯಿಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:17
16 ತಿಳಿವುಗಳ ಹೋಲಿಕೆ  

ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ?


ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.


ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಬಂದನು.


ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.


ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನುಡಿಯುವಾತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಇದು ನನ್ನ ಸಿಂಹಾಸನ ಸ್ಥಾನ, ನನ್ನ ಪಾದಸನ್ನಿಧಿ; ಇಲ್ಲಿ ನಾನು ಇಸ್ರಾಯೇಲ್ಯರ ಮಧ್ಯೆ ಸದಾ ವಾಸಿಸುವೆನು; ಇಸ್ರಾಯೇಲ್‍ವಂಶದವರಾಗಲಿ ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ ಗತಿಸಿದ ಅರಸರ ಶವಗಳಿಂದಲೂ


ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು