Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:22 - ಕನ್ನಡ ಸತ್ಯವೇದವು J.V. (BSI)

22 ಕರ್ತನು - ನಾನು ಅವರನ್ನು ಬಾಷಾನಿನಿಂದಲೂ ಸಮುದ್ರತಲದಿಂದಲೂ ಹಿಡಿದುತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22-23 ಪ್ರಭುವಿನ ನುಡಿ : “ನಿನ್ನ ಶತ್ರುಗಳ ನೆತ್ತರಲಿ ನೀ ಕಾಲ್ತೊಳೆವಂತೆ I ನಿನ್ನ ನಾಯಿಗಳಿಗದನೆಕ್ಕಲು ಸಾಕಷ್ಟು ಸಿಗುವಂತೆ I ಬಾಷಾನಿನಿಂದವರನು ನಾ ಮರಳಿ ಬರಮಾಡುವೆ I ಸಮುದ್ರ ತಳದಿಂದವರನು ನಾ ಮತ್ತೆ ಮೇಲೆತ್ತುವೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುಗಳನ್ನು ಹಿಡಿದು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:22
11 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು.


ಇಸ್ರಾಯೇಲ್ಯರೋ ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು; ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.


ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು