Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:29 - ಕನ್ನಡ ಸತ್ಯವೇದವು J.V. (BSI)

29 ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ ಅರಸರು ನಿಮಗೆ ಕಾಣಿಕೆಗಳನ್ನು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:29
18 ತಿಳಿವುಗಳ ಹೋಲಿಕೆ  

ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಸುತ್ತಣವರೆಲ್ಲರು ಭಯಂಕರನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವು ದೇಶಕ್ಕೆ ತಿರಿಗಿ ಬರಲೇ ಇಲ್ಲ.


ತೂರ್ ಸಂಸ್ಥಾನದವರು ಕಾಣಿಕೆಗಳಿಂದ ನಿನ್ನನ್ನು ಸನ್ಮಾನಿಸುವರು; ಪ್ರಜೆಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.


ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೋಸ್ಕರ ನನ್ನ ಸ್ವಂತ ಸೊತ್ತಿನಿಂದ


ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ


ಹಿಜ್ಕೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬಶ್ಮಶಾನ ಭೂವಿುಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಲು ದೊಡ್ಡವನೆಂದು ಎಣಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು