Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:5 - ಕನ್ನಡ ಸತ್ಯವೇದವು J.V. (BSI)

5 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:5
26 ತಿಳಿವುಗಳ ಹೋಲಿಕೆ  

ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸವಿಡಲಿ.


ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು.


ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತೀ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವದಿಲ್ಲ.


ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ; ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ ಎಂದು ಪ್ರಾರ್ಥನೆ ಮಾಡಿದನು.


ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಅವನು ನಿನ್ನ ಜನರಿಗೆ ನೀತಿಯಿಂದಲೂ ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರವು [ದೇವರಿಗೆ] ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ನೀತಿದ್ವಾರಗಳನ್ನು ತೆರೆಯಿರಿ; ಒಳಗೆ ಪ್ರವೇಶಿಸಿ ಯಾಹುವನ್ನು ಕೊಂಡಾಡುವೆನು.


ಶ್ವಾಸವಿರುವದೆಲ್ಲವೂ ಯೆಹೋವನನ್ನು ಸ್ತುತಿಸಲಿ; ಯಾಹುವಿಗೆ ಸ್ತೋತ್ರ!


ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು