Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:9 - ಕನ್ನಡ ಸತ್ಯವೇದವು J.V. (BSI)

9 ದೇವರೇ, ನೀನು ಹೇರಳ ಮಳೆಸುರಿಸಿ ಬಾಯ್ದೆರೆದಿದ್ದ ನಿನ್ನ ಸ್ವಾಸ್ತ್ಯವನ್ನು ಶಾಂತಿಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವಾ, ಹೇರಳವಾಗಿ ನೀ ಸುರಿಮಳೆಗರೆದೆ I ಬತ್ತಿದ ನಿನ್ನ ಸೊತ್ತನ್ನು ಸಮೃದ್ಧಿಗೊಳಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರೇ, ನೀನು ಮಳೆ ಸುರಿಸಿ, ಒಣಗಿ ಕೃಶವಾಗಿದ್ದ ಭೂಮಿಯನ್ನು ಫಲವತ್ತು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ, ದಣಿದ ನಿಮ್ಮ ಬಾಧ್ಯತೆಯನ್ನು ನೀವು ಉತ್ಸಾಹಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:9
10 ತಿಳಿವುಗಳ ಹೋಲಿಕೆ  

ನಿಮಗೆ ಗೋದಿ, ದ್ರಾಕ್ಷೆ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂವಿುಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಸರಿಯಾಗಿ ನಡಿಸುವನು;


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದು ಬಂದದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು; ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶದಿಂದ ಹನಿ ಬಿದ್ದಿತು; ಮೇಘಮಂಡಲವು ಮಳೆಗರೆಯಿತು.


ಯೆಹೋವನ ಮುಂದೆ ಪರ್ವತಗಳು ಕರಗಿ ಹೋದವು, ಇಸ್ರಾಯೇಲ್ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.


ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು