ಕೀರ್ತನೆಗಳು 69:12 - ಕನ್ನಡ ಸತ್ಯವೇದವು J.V. (BSI)12 ಊರುಬಾಗಲಲ್ಲಿ ಕೂತುಕೊಳ್ಳುವವರ ಆಡಿಕೆಗೆ ಗುರಿಯಾಗಿದ್ದೇನೆ. ಕುಡಿಕರು ನನ್ನ ವಿಷಯ ಹಾಡಿ ಗೇಲಿಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು. ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ. ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;