Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯಸಂಧನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ; ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:13
24 ತಿಳಿವುಗಳ ಹೋಲಿಕೆ  

ಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು ಎಂದು ದೇವರು ಹೇಳುತ್ತಾನಲ್ಲಾ. ಈಗಲೇ ಆ ಸುಪ್ರಸನ್ನತೆಯಕಾಲ; ಇದೇ ಆ ರಕ್ಷಣೆಯ ದಿನ.


ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವದರಲ್ಲಿ ಕೊಡು ಎಂದು ಹೇಳಿರಿ ಅಂದು ಅವರನ್ನು ಕಳುಹಿಸಿದನು.


ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ಇದರಿಂದ ಭಕ್ತರೆಲ್ಲರು ಸಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಮಹಾಪ್ರವಾಹವು ಅಂಥವರನ್ನು ಮುಟ್ಟುವದೇ ಇಲ್ಲ.


ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸಪಾನಮಾಡುತ್ತಿರುವಾಗ ಎಸ್ತೇರಳಿಗೆ - ಎಸ್ತೇರ್‍ರಾಣಿಯೇ, ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ದ್ರಾಕ್ಷಾರಸಪಾನ ಮಾಡುವಾಗ ಅರಸನು ತಿರಿಗಿ ಎಸ್ತೇರಳಿಗೆ - ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಅನ್ನಲು ಎಸ್ತೇರಳು -


ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಲು


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಅವರು ಕೂತುಕೊಳ್ಳಲಿ, ಏಳಲಿ, ನೋಡುತ್ತಲೇ ಇರು; ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು