ಕೀರ್ತನೆಗಳು 69:15 - ಕನ್ನಡ ಸತ್ಯವೇದವು J.V. (BSI)15 ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಮಡುವು ನನ್ನನ್ನು ಒಳಗೆ ಎಳಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹುಚ್ಚು ಹೊಳೆಯು ಎನ್ನ ಕೊಚ್ಚದಿರಲಯ್ಯಾ I ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ I ಪಾತಾಳವೆನ್ನನು ನುಂಗದಿರಲಯ್ಯಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ. ಅಗಾಧವು ನನ್ನನ್ನು ನುಂಗದೆ ಇರಲಿ. ಕುಣಿಯು ನನ್ನ ಮೇಲೆ ತನ್ನ ಬಾಯನ್ನು ಮುಚ್ಚದೆ ಇರಲಿ. ಅಧ್ಯಾಯವನ್ನು ನೋಡಿ |